ಛದ್ಮವೇಷದಲ್ಲಿ ಕುಣಿದು ಕುಪ್ಪಳಿಸಿದ ಮಕ್ಕಳು

12..3
ಯಕ್ಸಂಬಾ ಪಟ್ಟಣದ ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದಿಂದ ಏರ್ಪಡಿಸಿದ್ದ ಮಳೆಗಾಲದ ಛದ್ಮವೇಷ ಕಾರ್ಯಕ್ರಮದಲ್ಲಿ ಮಕ್ಕಳು ಕುಣಿದು ಕುಪ್ಪಳಿಸಿದರು.
Published on

ಚಿಕ್ಕೋಡಿ ಗ್ರಾಮೀಣ: ತಾಲೂಕಿನ ಯಕ್ಸಂಬಾ ಪಟ್ಟಣದ ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಮಳೆಗಾಲದ ಛದ್ಮವೇಷ ಕಾರ್ಯಕ್ರಮ ಜನಮನ ಸೆಳೆಯಿತು.

ಮಕ್ಕಳು ಮಳೆಗಾಲದ ವಿವಿಧ ವೇಷಭೂಷಣ ಧರಿಸಿ, ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿದರು. ಮುಖ್ಯ ಶಿಕ್ಷಕ ವಿ.ಆರ್.ಭಿವಸೆ ಮಾತನಾಡಿ, ಮಕ್ಕಳಿಗೆ ಮನರಂಜನೆ ಜತೆಗೆ ಪಠ್ಯದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವಲ್ಲಿ ಚಟುವಟಿಕೆಗಳು ಸಹಕಾರಿಯಾಗಿವೆ. ಚಟುವಟಿಕೆಗಳು ಮಕ್ಕಳ ಮತ್ತು ಶಿಕ್ಷಕರ ಬಾಂಧವ್ಯ ಗಟ್ಟಿಯಾಗಿಸುತ್ತವೆ ಎಂದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಜಿ.ಕಾಮತ, ಜೊಲ್ಲೆ ಶಿಕ್ಷಣ ಸಂಸ್ಥೆಯ ಸಂಚಾಲಕ ಮಂಡಳಿ ಸದಸ್ಯರಾದ ಲತಾ ವಾಳಕೆ, ಅನುಸೂಯಾ ಪಾಟೀಲ, ಶಿಕ್ಷಕರಾದ ಆರ್,ಬಿ,ಕಾಂಬಳೆ, ಎಸ್.ಎಂ.ಮಠಪತಿ, ಎ.ಆರ್.ಕೆರಗುಟ್ಟೆ ಹಾಗೂ ವಿದ್ಯಾರ್ಥಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net