ಛಾಯಾಗ್ರಾಹಕರಿಗೆ ಅಕಾಡೆಮಿ ಸ್ಥಾಪನೆಯಾಗಲಿ

09Kush02
Published on

ಕುಶಾಲನಗರ: ಛಾಯಾಗ್ರಾಹಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ವೃತ್ತಿಪರರಿಗೆ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಸರ್ಕಾರಕ್ಕೆ ಸಲಹೆ ನೀಡಿದರು.


ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇತ್ತೀಚೆಗೆ ಕುಶಾಲನಗರದ ರೈತ ಭವನದಲ್ಲಿ ಆಯೋಜಿಸಲಾಗಿದ್ದ ಛಾಯಾ ಸಮ್ಮಿಲನ-2023 ಕಾರ್ಯಕ್ರಮದಲ್ಲಿ ಕ್ಷೇಮಾಭಿವೃದ್ಧಿ ನಿಧಿ ಉದ್ಘಾಟಿಸಿ ಅವರು ಮಾತನಾಡಿದರು.


ಕರೊನಾ ಸಂದರ್ಭದಲ್ಲಿ ಛಾಯಾಗ್ರಾಹಕರು ಸಮಸ್ಯೆಗೆ ಸಿಲುಕಿದ್ದರು. ವೃತ್ತಿಯಲ್ಲಿ ತಂತ್ರಜ್ಞಾನ ಅರಿವು ಆಳವಾಗಿರಬೇಕು. ಸರ್ಕಾರ ಛಾಯಾಗ್ರಾಹಕರಿಗೆ ನೆರವು ನೀಡಲು ಮುಂದೆ ಬರಬೇಕು ಎಂದು ಅಭಿಪ್ರಾಯಪಟ್ಟರು.


ಕರ್ನಾಟಕ ರಾಜ್ಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಸ್.ಪರಮೇಶ್ ಮಾತನಾಡಿ, ಸರ್ಕಾರಕ್ಕೆ ನಮ್ಮ ಹಲವು ಬೇಡಿಕೆಗಳನ್ನು ಹಲವು ಬಾರಿ ಸಲ್ಲಿಸಿದ್ದೇವೆ. ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.


ರಾಜ್ಯ ಸಮಿತಿಯ ಉಪಾಧ್ಯಕ್ಷ ಎಚ್.ಎಸ್.ನಾಗೇಶ್, ರಾಜ್ಯ ಕಾರ್ಯದರ್ಶಿ ಮುರಳಿ, ರಾಜ್ಯ ನಿರ್ದೇಶಕ ಜೂಪಿಟರ್ ಮಂಜು, ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಲೊಮನ್ ಡೇವಿಡ್, ಸಹಕಾರ್ಯದರ್ಶಿ ರಂಜಿತ್, ಕುಶಾಲನಗರ ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜಿ ಕುಮಾರ್, ಕಾರ್ಯದರ್ಶಿ ಕಾಶಿ, ಮಡಿಕೇರಿ ಮಂಜಿನನಗರಿ ಛಾಯಾಗ್ರಾಹಕರ ಸಂಘದ ಪ್ರದೀಪ್ ಮರಗೋಡು, ದಕ್ಷಿಣ ಕೊಡಗು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸುರೇಶ್ ಬಾಬು, ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಸುಬ್ರಮಣಿ, ಜಿಲ್ಲಾ ಉಪಾಧ್ಯಕ್ಷ ಜನಾರ್ದನ್, ರಾಜ್ಯ ಸಮಿತಿಯ ಕೊಡಗು ಪ್ರತಿನಿಧಿ ದೀಪಕ್ ಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net