ಜ.19ರಂದು ಜಿಲ್ಲಾಮಟ್ಟದ ಭಜನಾ ಸ್ಪರ್ಧೆ

Published on

ಚಾಮರಾಜನಗರ: ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ 25 ವರ್ಷಗಳನ್ನು ಪೂರೈಸಿದ ಪ್ರಯುಕ್ತ ಜ.19ರಂದು ಜಿಲ್ಲಾಮಟ್ಟದ ಭಜನಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘರಾಜೇಂದ್ರ ಮಹಾಸಂಸ್ಥಾನ ಮಠದಲ್ಲಿ ಸ್ಪರ್ಧೆ ನಡೆಯಲಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಭಜನಾ ತಂಡವು ಜ.17ರೊಳಗೆ ನೊಂದಣಿ ಮಾಡಿಕೊಳ್ಳಬೇಕು. ಸ್ಪರ್ಧೆಯ ನಿಬಂಧನೆಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿ.ಶಶಿಧರ(ಮೊ:9480732622), ಶಿವಕುಮಾರಸ್ವಾಮಿ(ಮೊ:9449010388) ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net