ಜ.20ರಂದು ತೆರಕಣಾಂಬಿಯಲ್ಲಿ ವಿದ್ಯುತ್ ವ್ಯತ್ಯಯ

New Power Cut
Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಗುಂಡ್ಲುಪೇಟೆ ಉಪವಿಭಾಗದ ವ್ಯಾಪ್ತಿಯ ತೆರಕಣಾಂಬಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಜ.20ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬೆರಟಹಳ್ಳಿ ಎನ್.ಜೆ.ವೈ., ಗುರುವಿನಪುರ ಎನ್.ಜೆ.ವೈ, ತ್ರಿಯಂಬಕಪುರ ಐಪಿ, ಕಗ್ಗಳ ಐಪಿ ಹಾಗೂ ಕೆಲಸೂರು ಐಪಿ ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂ.ಸಂ 1912 ಗೆ ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net