ಜ. 23ರಂದು ತಾಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟ

jds-hanurur-M.R.Manjunath
????????????????????????????????????
Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹನೂರು ತಾಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜ.23ರಂದು ಬೆಳಿಗ್ಗೆ 10.30 ಗಂಟೆಗೆ ಹನೂರಿನ ಶ್ರೀಮಲೆಮಹದೇಶ್ವರ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಸಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಮ್ತಾಜ್ ಭಾನು, ಉಪಾಧ್ಯಕ್ಷ ಆರ್.ಆನಂದಕುಮಾರ್, ಸದಸ್ಯ ಪವಿತ್ರ ಪ್ರಸನ್ನಕುಮಾರ್, ತಹಶೀಲ್ದಾರ್ ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಗುರುಲಿಂಗಯ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net