ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದ ಶ್ರೀಚನ್ನಬಸವೇಶ್ವರ ಕನ್ನಡ ಮತ್ತು ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 21 ನೇ ಶಾಲಾವಾರ್ಷಿಕೋತ್ಸವ ಸಮಾರಂಭ ಜ.24 ರಂದು ಬೆಳಗ್ಗೆ 10.30ಕ್ಕೆ ಶಾಲಾವರಣದಲ್ಲಿ ಜರುಗಲಿದೆ. ಶ್ರೀಚನ್ನಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷರು, ಹರವೆವಿರಕ್ತಮಠಾಧೀಶರಾದ ಶ್ರೀ ಸರ್ಪಭೂಷಣಸ್ವಾಮೀಜಿ ಸಾನಿಧ್ಯ ವಹಿಸುವರು.
ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಸಮಾರಂಭ ಉದ್ಘಾಟಿಸುವರು. ಮತ್ತೋರ್ವ ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು. ಮೈಸೂರು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಪ್ರದಾನ ಭಾಷಣ ಮಾಡುವರು. ಬಿಇಒ ಹನುಮಶೆಟ್ಟಿ ಬಹುಮಾನ ವಿತರಿಸುವರು. ಕೆಎಂಎಫ್ ನಿರ್ದೇಶಕ ಎಂ.ನಂಜುಜುಅಡಸ್ವಾಮಿ ಪ್ರತಿಭಾಪುರಸ್ಕಾರ ವಿತರಿಸುವರು.
ಡಿಡಿಪಿಐ ರಾಮಚಂದ್ರರಾಜೇಅರಸ್, ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು, ಸದಾಶಿವಮೂರ್ತಿ, ವಕೀಲರಾದ ಮೈಸೂರಿನ ಎಚ್.ಪಿ.ಮಹದೇವಪ್ಪ, ಪ್ರಭುಸ್ವಾಮಿ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಮಾಜಿನಿರ್ದೇಶಕ ಶಿವಮೂರ್ತಿ, ಚನ್ನಬಸವೇಶ್ವರವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಎಸ್.ಗಿರೀಶ್, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಶಾಲಾಮಕ್ಕಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.