ಜ. 29ರಂದು ತಾಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟ

Published on

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನ ಗುಂಡ್ಲುಪೇಟೆ ತಾಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜ.29 ರಂದು ಗುಂಡ್ಲುಪೇಟೆಯ ಡಿ. ದೇವರಾಜ ಅರಸು ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕ್ರೀಡಾಪಟುಗಳು ಕ್ರೀಡಾಕೂಟದ ದಿನದಂದು ಬೆಳಿಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ, ಮೆಡಲ್, ಟ್ರೋಫಿಗಳನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಂಪರ್ಕಿಸಬಹುದು ಅಥವಾ ದೂ.ಸಂ 08226-224932, ಮೊ.ಸಂ 9916466659, 9844160841, 9945615695, 9880211027 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net