

ಬಾಗಲಕೋಟೆ: ಸಿಟಿಜಿನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ವತಯಿಂದ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜ.೧೧ ರಂದು ಬಸವೇಶ್ವರ ಆಡಿಟೋರಿಯಂ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಳೇದಗುಡ್ಡದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಎನ್.ಮಹೇಶ, ಪುಸ್ತಕದ ಲೇಖಕರಾದ ವಿಕಾಸ್ ಕುಮಾರ ಪಿ. ಅತಿಥಿಗಳಾಗಿ ಆಗಮಿಸುವರು. ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲೆಯ ಜನಪ್ರಽಗಳು ಭಾಗವಹಿಸುವರು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಉಪಾಧ್ಯಕ್ಷ ಮಲ್ಲಯ್ಯ ಮೂಗನೂರಮಠ, ಶಿವಾನಂದ ಟವಳಿ, ಮುತ್ತಣ್ಣ ಬೆಣ್ಣೂರ, ಯಲ್ಲಪ್ಪ ಬೆಂಡಿಗೇರಿ, ಯಲ್ಲಪ್ಪ ನಾರಾಯಣಿ, ಶಿವಾನಂದ ಸುರಪುರ ಉಪಸ್ಥಿತರಿದ್ದರು.