ಜ.೧೫ ರಂದು ಗಿನ್ನಿಸ್ ದಾಖಲೆಯತ್ತ ಯೋಗಾಥಾನ್

bkt-10-5
ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಅಧ್ಯಕ್ಷತೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಕುರಿತು ಪೂರ್ವ ಸಿದ್ದತಾ ಸಭೆ ಜರುಗಿತು.
Published on

ಬಾಗಲಕೋಟೆ: ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಮೈದಾನದಲ್ಲಿ ಜ. ೧೫ ರಂದು ಗಿನ್ನೀಸ್ ದಾಖಲೆ ಮಾಡುವ ನಿಟ್ಟಿನಲ್ಲಿ ಯೋಗಾಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಯೋಗಾಥಾನ್ ಕಾರ್ಯಕ್ರಮ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗಾಥಾನ್ ಕಾರ್ಯಕ್ರಮದಲ್ಲಿ ೧೫ ಸಾವಿರ ಜನ ಏಕ ಕಾಲದಲ್ಲಿ ಸಾಮೂಹಿಕವಾಗಿ ಯೋಗ ಮಾಡಲಿದ್ದಾರೆ. ಮೈದಾನದಲ್ಲಿ ಒಂದು ಮುಖ್ಯ ವೇದಿಕೆ ಹಾಗೂ ೧೨ ಮಿನಿ ವೇದಿಕೆಗಳನ್ನು ಮಾಡಲಾಗುತ್ತಿದ್ದು, ೮೦ ಯೋಗಾ ಇಸ್ಟ್ರಕ್ಟರ್‌ಗಳು ನೇಮಿಸಲಾಗಿದೆ ಎಂದು ತಿಳಿಸಿದರು.
ಯೋಗಾಥಾನ್ ಕಾರ್ಯಕ್ರಮಕ್ಕೆ ಶಾಲಾ, ಕಾಲೇಜು, ಪದವಿ ಹಾಗೂ ಮೆಡಿಕಲ್, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಸಮಯಕ್ಕೆ ಸರಿಯಾಗಿ ಮಕ್ಕಳ ಕರೆತರಲು ಬಸ್‌ಗಳ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ವಿವಿಧ ಇಲಾಖೆಯ ವಸತಿ ಶಾಲೆಗಳ ಮಕ್ಕಳನ್ನು ಕರೆತಲು ಸಹ ಆಹಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ತಾತ್ಕಾಲಿಕ ಶೌಚಗೃಹ ವ್ಯವಸ್ಥೆ, ಮೈದಾನ ಸ್ವಚ್ಛವಾಗಿಡಲು ಸೂಚಿಸಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಒ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಡಿಗೇರ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಗಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net