

ಮೈಸೂರು: ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್‌ನಲ್ಲಿ ರಿಯಾಯಿತಿ ನೀಡುವ ಸಂಬಂಧ ಚರ್ಚೆ ನಡೆಸಲಾಗಿದೆ. ಹಿರಿಯ ನಾಗರಿಕರು ಹಾಗೂ ಪಿಯು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡುವ ಅಧಿಕಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿರುವ ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ ಕೊಠಡಿಗಳು ಪೂರ್ಣ ಪ್ರಮಾಣದಲ್ಲಿ ಭರ್ತಿ ಅಗುತ್ತಿಲ್ಲ. ಇದಕ್ಕೆ ಬೆಲೆ ಏರಿಕೆ ಕಾರಣ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಾಗಾಗಿ, ರಿಯಾಯಿತಿ ನೀಡುವ ಮೂಲಕ ಆಕರ್ಷಕಗೊಳಿಸಲಾಗುವುದು. ಪ್ರಕೃತಿ ಸೌಂದರ್ಯ ಸವಿಯಲು ಇದರಿಂದ ಅನುಕೂಲವಾಗುತ್ತದೆ ಎಂದರು.
ಕೋವಿಡ್‌ನಿಂದ 2021ರಲ್ಲಿ 61 ಕೋಟಿ ರೂ. ಮಾತ್ರ ಆದಾಯವಾಗಿದೆ. 2022-23ರಲ್ಲಿ 111 ಕೋಟಿ ರೂ.ಗೆ ಏರಿಕೆಯಾಗಿದ್ದು, ಶೇ. 47ರಷ್ಟು ಕೊಠಡಿಗಳಷ್ಟೇ ಭರ್ತಿಯಾಗುತ್ತಿವೆ. ಈ ಪ್ರಮಾಣವನ್ನು ಶೇ.75ಕ್ಕೆ ಏರಿಕೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.