ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಜ.1ಕ್ಕೆ

CTD 21 AMRASHILPI JAKANACHARI--03
Published on

ಚಿತ್ರದುರ್ಗ: ಜಿಲ್ಲಾಡಳಿತದಿಂದ ಜನವರಿ 1ರಂದು ನಗರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಉಮೇಶ ಪತ್ತಾರ ತಂಡದವರು ಗೀತಗಾಯನ ಪ್ರಸ್ತುತಪಡಿಸುವರು. ಜಕಣಾಚಾರಿ ಕುರಿತು ಉಪನ್ಯಾಸವಿರುತ್ತದೆ ಎಂದರು.
ವಾಸ್ತುಶಿಲ್ಪ ಪರಂಪರೆಗೆ ಅಪಾರ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿ ಜಕಣಾಚಾರಿ ಅವರ ಸಂಸ್ಮರಣಾ ದಿನವನ್ನು ಯಶಸ್ವಿಯಾಗಿ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಸಮಾಜದವರು ಸಕ್ರಿಯವಾಗಿ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ವಿಶ್ವಕರ್ಮ ಸಮಾಜದಿಂದ, ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಸಮಾಜದ ಒಬ್ಬರಿಗೆ ಜಕಣಾಚಾರಿ ಪ್ರಶಸ್ತಿ ನೀಡಲಾಗುವುದು ಎಂದರು.
ಸಾಧಕರನ್ನು ಸನ್ಮಾನಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕೆಂದು ಸಮಾಜದ ಮುಖಂಡರು ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಕೆ.ಟಿ.ಸುರೇಶಾಚಾರ್, ಕೃಷ್ಣಚಾರ್, ಸಿ.ಆರ್.ಸು ರೇಶ್, ಎ.ಶಂಕರಾಚಾರ್, ಗೋವರ್ಧನಾಚಾರ್, ಮಲ್ಲಿಕಾರ್ಜುನ ಆಚಾರ್, ಎಂ.ಶಂಕರಮೂರ್ತಿ, ಬಾಲಬ್ರಹ್ಮಚಾರ್, ಸುನಿಲ್‌ಕುಮಾರ್, ಸಿದ್ದೇಶ್, ಆರ್.ಡಿ.ಸಂಜಯ್, ಪಿ.ಎನ್.ಮುರುಳಿಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net