ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ

b75ab29c-38a8-4062-b5d8-235197774ea1
Published on

ಬಾಗಲಕೋಟೆ: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ‌ ಉಪ‌ ಪ್ರಧಾನ‌ಮಂತ್ರಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ‌‌ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಅಪರ‌‌ ಜಿಲ್ಲಾಧಿಕಾರಿ ಪರಶುರಾಮ‌ ಶಿನ್ನಾಳಕರ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ‌ ಬಡಿಗೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net