

ಬಾಗಲಕೋಟೆ: ಅಽಕಾರ ಮತ್ತು ಐಶ್ವರ್ಯಗಳಿಂದ ಗಳಿಸಲಾಗದ ಕೀರ್ತಿ ಸೇವೆ, ತ್ಯಾಗದಿಂದ ಪಡೆದುಕೊಳ್ಳಬಹುದು ಎನ್ನುವ ಸಂದೇಶ ಸಾರಿದವರು ಡಾ.ಬಾಬು ಜಗಜೀವನರಾಂ ಅವರು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.
ನಗರದ ಶಿವಾನಂದ ಜೀನ್‌ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಶನಿವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮಹದಾಸೆ ಹೊಂದಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿದವರು. ಇಂತಹ ಮಹಾನ್ ನಾಯಕರ ಕೊಡುಗೆ ತತ್ವಾದರ್ಶಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ0ಡ ಮುತ್ತಣ್ಣ ಬೆಣ್ಣೂರ ಅವರು ಡಾ. ಬಾಬು ಜಗಜೀವನರಾಂ ಅವರ ಜೀವನ ನಡೆದು ಬಂದ ದಾರಿ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಡಾ.ಎಂ.ಎಸ್.ದಡ್ಡೆನ್ನವರ, ಜಿ.ಎನ್.ಪಾಟೀಲ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ್, ಸದಸ್ಯೆ ಸರಸ್ವತಿ ಕುರಬರ, ಶಿವಾನಂದ ಟವಳಿ, ಯಲ್ಲಪ್ಪ ನಾರಾಯಣಿ, ಸತ್ಯನಾರಾಯಣ ಹೆಮಾದ್ರಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ ಇತರರು ಇದ್ದರು.