

ವಿಜಯವಾಣಿ ಸುದ್ದಿಜಾಲ ಭಟ್ಕಳ
ತಾಲೂಕಿನ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ(37) ಚಿರತೆಯ ದಾಳಿಗೆ ಒಳಗಾದ ವ್ಯಕ್ತಿ. ಅವರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ದುರ್ಗು ಮರಾಠಿ ಕೈ ಕಚ್ಚಿ ಗಾಯಗೊಳಿಸಿದೆ. ವ್ಯಕ್ತಿಯು ಚಿರಿ ಕೊಂಡಿದ್ದು ಜನರು ಬರುತ್ತಿರುವಂತೆ ಚಿರತೆ ಪರಾರಿಯಾಗಿದೆ. ಚಿರತೆಯ ದಾಳಿಯಿಂದ ನೂಜ್ ಭಾಗದ ಜನರಲ್ಲಿ ಆತಂಕ ಮನೆ ಮಾಡಿದ್ದು ಇಷ್ಟು ದಿನ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ವನ್ಯ ಜೀವಿಗಳು ಮಾನವನ ಮೇಲೆ ಪ್ರಾಣಾಂತಿಕ ದಾಳಿ ಮಾಡಲು ಆರಂಭಿಸಿದೆ. ಕೂಡಲೆ ಅರಣ್ಯ ಇಲಾಖೆ ನಿಗಾವಹಿಸಬೇಕು. ಗ್ರಾಮಕ್ಕೆ ಬರುವ ಕ್ರೂರ ಮೃಗಗಳನ್ನು ಸೆರೆ ಹಿಡಿದು ದೂರ ಬೀಡಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆರ್‌ಎಫ್‌ಒ ಶರತ ಶೆಟ್ಟಿ ಬೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಗಾಯಗೊಂಡ ವ್ಯಕ್ತಿಗೆ ಸರ್ಕಾರದ ವತಿಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.