ಜನ ಜಾಗೃತಿಯಿಂದ ಡ್ರಗ್ಸ್ ಮುಕ್ತ ಸಮಾಜ

28ss1pravin mahiti
Published on

ಶನಿವಾರಸಂತೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶನಿವಾರಸಂತೆ ಘಟಕದಿಂದ ಡ್ರಗ್ಸ್ ಮುಕ್ತ ಸಮಾಜ ಕುರಿತು ಪಟ್ಟಣದ ಮುಖ್ಯರಸ್ತೆ, ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ವಿದ್ಯಾರ್ಥಿ ಪರಿಷತ್ ಪ್ರಮುಖರು ಮತ್ತು ವಿದ್ಯಾರ್ಥಿಗಳು ಮೆರವಣಿಗೆ ಜಾಗೃತಿ ಮೂಡಿಸಿದರು.

ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್ ಮಾತನಾಡಿ, ವಿದ್ಯಾರ್ಥಿಗಳು, ಯುವಕರು ಡ್ರಗ್ಸ್‌ಗಳಂತಹ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದರಿಂದ ಆರೋಗ್ಯ ಮತ್ತು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಅಮುಲು ಸೇವನೆಯಿಂದ ಸಮಾಜದಲ್ಲಿ ತನ್ನ ಗೌರವನ್ನು ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವಮಾನಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ ಎಂದರು.

ಮಾದಕ ವಸ್ತುಗಳ ಸೇವನೆ ಮತ್ತು ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಯುವಕರು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕು ಜನ ಜಾಗೃತಿಯಿಂದ ಡ್ರಗ್ಸ್ ಮುಕ್ತ ಸಮಾಜ ಸಾಧ್ಯ ಎಂದು ಹೇಳಿದರು.

ನಂತರ ಪಟ್ಟಣದ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರು, ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net