ಜನ ಸಂಕಲ್ಪ ಯಾತ್ರೆ ತೀವ್ರಗೊಳಿಸುತ್ತೇವೆ

BasavarajBommai
Published on

ಹುಬ್ಬಳ್ಳಿ: ಡಿಸೆಂಬರ್ ತಿಂಗಳಲ್ಲಿ ಜನ ಸಂಕಲ್ಪ ಯಾತ್ರೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವರ್ಷದಲ್ಲಿ ಜನರ ಬಳಿ ಹೋಗುವ ಕೆಲಸ್ ಮಾಡುತ್ತಿದ್ದೇವೆ. ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ, ಮುಂಬೈ ಕರ್ನಾಟಕ ಭಾಗದಲ್ಲಿ ಜನ ಸಂಕಲ್ಪ ಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಇದನ್ನು ಉಳಿದೆಡೆ ಆಯೋಜಿಸುತ್ತೇವೆ ಎಂದರು.

ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಜಾಯಿನ್ ಪಿಎಫ್​ಐ ಗೋಡೆ ಬರಹದ ಬಗ್ಗೆ ಪೋಲಿಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net