ಬಳ್ಳಾರಿ : ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ. ಸಿದ್ಧರಾಜು ತಿಳಿಸಿದ್ದಾರೆ.
ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ : ಅ. 09 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಳ್ಳಾರಿ ತಹಶೀಲಾರರ ಕಚೇರಿಯ ಸಭಾಂಗಣ, ಅ. 15 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿರಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ ಮತ್ತು ಅ. 19 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.