

ಹಿರೀಸಾವೆ: ಉತ್ತಮ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ಮೂಲಕ ಜನರ ಸೇವೆಗೆ ಕಾಂಗ್ರೆಸ್ ಸದಾ ಸಿದ್ಧ್ದವಿರುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.
ಹೋಬಳಿಯ ನಿಂಬೇಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಆಯೋಜಿಸಿದ್ದ ನುಗ್ಗೇಹಳ್ಳಿ, ಬಾಗೂರು ಹಾಗೂ ಹಿರೀಸಾವೆ ಹೋಬಳಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದೇಶ ಹಾಗೂ ರಾಜ್ಯದ ಹಿತ ಕಾಪಾಡಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷದ ಸಂಘಟನೆ ಮಾಡೋಣ. ತಾಲೂಕಿನ ಜನ ಕಾಂಗ್ರೆಸ್ ಪರ ಇದ್ದಾರೆ. ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಮಂಜೇಗೌಡ ಮಾತನಾಡಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡೋಣ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಶಂಕರ್, ಮಾಜಿ ಅಧ್ಯಕ್ಷ ಬೊಮ್ಮೇಗೌಡ, ನಿರ್ದೇಶಕ ಸೀಗೇಕೊಪ್ಪಲು ಮಂಜೇಗೌಡ, ತಾಪಂ ಮಾಜಿ ಉಪಾಧ್ಯಕ್ಷ ಕಿರಣ್, ಕಾಂಗ್ರೆಸ್ ಮುಖಂಡರಾದ ಸಿ.ಮಂಜೇಗೌಡ, ಎನ್.ಆರ್.ರತ್ನರಾಜ್, ನಂಜೇಗೌಡ ಇತರರು ಇದ್ದರು.