

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ಅನುದಾನ 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ, ಈ ಕು ರಿತಂತೆ ಚಿತ್ರದುರ್ಗ ಸಂಸದರೂ ಆಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಯಾವುದೇ ಚಕಾರ ಎತ್ತದಿರುವುದು ಜಿಲ್ಲೆ ನರ ದುರಂತವಾಗಿದೆ ಎಂದು ಆಮ್ ಆದ್ಮಿಪಾರ್ಟಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹತ್ತಾರು ವರ್ಷಗಳಿಂದ ನೀರಾವರಿಗಾಗಿ ರೈತರು ನಿರತಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ. ಆದರೆ ಚುನಾಯಿತ ಪ್ರತಿನಿಧಿಗಳ ನಿರಾಸಕ್ತಿಯಿಂದಾಗಿ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಹಿಂದುಳಿದ,ಬಡತನ ರೇಖೆಯ ಕೆಳಗಿರುವ ಜಿಲ್ಲೆಯಲ್ಲಿ ಮಳೆ ಪ್ರಮಾಣವೂ ಕಡಿಮೆ ಇದ್ದು,ಸಾವಿರಾರು ಅಡಿ ಕೊರೆದರು ಕೊಳವೆ ಬಾವಿಯಲ್ಲಿ ನೀರು ಸಿಗುತ್ತಿಲ್ಲ.
ಇಂಥ ಕಠಿಣ ಸನ್ನಿವೇಶದಲ್ಲಿ ಜಿಲ್ಲೆ ರೈತರ ನೆರವಿಗೆ ಧಾವಿಸಬೇಕಿರುವ ಕೇಂದ್ರ ಸಚಿವರು ಕಾಳಜಿ ವಹಿಸುತ್ತಿಲ್ಲ. ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸದೆ ರಾಜ್ಯಸರ್ಕಾರದ ಮೇಲೆ ಗೂಬೆ ಕೊರಿಸುವ ಕೆಲಸ ಮಾಡುತ್ತಿದ್ದಾರೆ,ಅನುದಾನದ ವಿಚಾರದಲ್ಲಿ ರೈತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆಂದು ಆರೋಪಿಸಿದರು.
ಯೋಜನೆ ಅನುಷ್ಠಾನ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿವೆ. ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ನಗರದಲ್ಲಿ ನಡೆಸುತ್ತಿರುವ ರೈತರ ಅನಿರ್ದಿಷ್ಟಾವಧಿ ಹೋರಾಟಕ್ಕೆ ತಮ್ಮ ಪಕ್ಷದ ಬೆಂಬಲವಿದೆ ಎಂದರು. ನಿಸಾರ್‌ಆಹ್ಮದ್,ರಾಮಪ್ಪ,ಕುಬೇಂದ್ರನಾಯ್ಕ,ಲೋಕೇಶ್,ಜ್ಯೋತಿ,ವಿನೋದಮ್ಮ ಇದ್ದರು.