ಜನಪ್ರತಿನಿಧಿಗಳಿಗೆ ರು.3.73 ಲಕ್ಷ ಗೌರವಧನ ಬಿಡುಗಡೆ

B.G.PATIL
Published on

ಕಲಬುರಗಿ: ಯಾದಗಿರಿ, ಕಲಬುರಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಮಾಸಿಕವಾಗಿ ೩,೭೩,೬೦೦ ರೂ. ಗೌರವ ಧನ ನೀಡಲಾಗಿದೆ ಎಂದು ಪೌರಾಡಳಿತ ಸಚಿವ ರೆಹೆಮಾನ್ ಖಾನ್ ತಿಳಿಸಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಉಭಯ ಜಿಲ್ಲೆಗಳ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳಲ್ಲಿನ ಚುನಾಯಿತ, ನಾಮನಿರ್ದೇಶಿತ ಪ್ರತಿನಿಧಿಗಳಿಗೆ ಸ್ಥಳೀಯವಾಗಿ ಸಂಗ್ರಹವಾಗುವ ಸ್ವಂತ ನಿಧಿ, ಆದಾಯದಿಂದ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್, ಸದಸ್ಯರ ಗೌರವ ಧನ ಹೆಚ್ಚಳ ಮಾಡುವುದಕ್ಕೆ ಪರಿಶೀಲಿಸಿ ಪ್ರಸ್ತುತ ನೀಡುತ್ತಿರುವ ಗೌರವ ಧನ ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಪ್ರಸ್ತಾವನೆ ತಿರಸ್ಕರಿಸಲಾಗಿದೆ. ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net