ಜನಮಾನಸದಲ್ಲಿ ಮಾಜಿ ಸಿಎಂ ಬಂಗಾರಪ್ಪ ಶಾಶ್ವತ; 11ನೇ ವರ್ಷದ ಪುಣ್ಯಸ್ಮರಣೆ

SOR WEB
Published on

ಸೊರಬ: ಬಡವರ, ದೀನ ದಲಿತರ ಪರವಾಗಿ ತಮ್ಮ ಅಧಿಕಾರವಧಿಯಲ್ಲಿ ಜನಪ್ರಿಯ ಯೋಜನೆಗಳನ್ನು ರೂಪಿಸಿದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಎಂ.ಡಿ.ಉಮೇಶ್ ಹೇಳಿದರು. 11ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಖಾಸಗಿ ನಿಲ್ದಾಣದ ಮುಂಭಾಗದಲ್ಲಿರುವ ಎಸ್.ಬಂಗಾರಪ್ಪ ಅವರ ಪತ್ರಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ರೈತಾಪಿ ಕುಟುಂಬದಲ್ಲಿ ಹುಟ್ಟಿದ ಬಂಗಾರಪ್ಪ, ತಮಗೆ ದೊರೆತ ಅಧಿಕಾರವನ್ನು ಜನಸಾಮಾನ್ಯರ ಅಭ್ಯುದಯಕ್ಕಾಗಿ ಬಳಸಿದರು. ಗ್ರಾಮೀಣ ಕೃಪಾಂಕ ಜಾರಿಗೊಳಿಸಿದ್ದರ ಪರಿಣಾಮವಾಗಿ ಇಂದು ಸಾವಿರಾರು ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ. ಅಕ್ಷೇಯ, ಆರಾಧನೆ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಬಡವರ ಪರ ಯೋಜನೆಗಳನ್ನು ಜಾರಿಗೆ ತಂದ ಮಹಾನ್ ನಾಯಕ ಅವರಾಗಿದ್ದರು. ತಮ್ಮ ನೇರ, ನುಡಿಯಿಂದಲೇ ರಾಜಕಾರಣದಲ್ಲಿ ಛಾಪು ಮೂಡಿಸಿ ಜನನಾಯಕರಾಗಿದ್ದರು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net