ಜನರ ಅಭಿವೃದ್ಧಿಗೆ ಪ್ರತಿಜ್ಞೆ ಮಾಡಿ,ನೌಕರರಿಗೆ ಡಿಸಿ ಸಲಹೆ

dpn 01
Published on

ಚಿತ್ರದುರ್ಗ:ಸರ್ಕಾರಿ ನೌಕರರು ಜನರಿಗೆ ಅಗತ್ಯ ಸೇವೆಗಳನ್ನು ಸಕಾಲಕ್ಕೆ ತಲುಪಿಸಬೇಕೆಂದು ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರು ಹೇ ಳಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಹಲವು ಹೊಸ ಯೋಜನೆಗಳು,ಫಲಾನುಭವಿಗಳ ಜೀವನದಲ್ಲಿ ಮಹತ್ತರ ಬದ ಲಾವಣೆಗಳನ್ನು ತರಲಿವೆ. ಇವುಗಳನ್ನು ಕಾಲ ಮಿತಿಯೊಳಗೆ ಜನರಿಗೆ ತಲುಪಿಸುವ ಹೊಣೆ ಸರ್ಕಾರಿ ನೌಕರರ ಮೇಲಿದೆ. ಜನರ ಸೇವೆಗಾಗಿ ಯೇ ನಾವಿದ್ದೇವೆ ಎಂಬುದನ್ನು ಮರೆಯುವಂತಿಲ್ಲ. ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಅಧಿಕಾರಿ-ಸಿಬ್ಬಂದಿ ಜನರ ಏಳಿಗೆಗೆ ಶ್ರಮಿಸು ವುದಾಗಿ ಪ್ರತಿಜ್ಞೆ ಮಾಡಬೇಕೆಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,ಉಪವಿಭಾಗಾಧಿಕಾರಿ ಎಂ.ಕಾರ್ತಿಕ್,ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಮಧುಸೂದನ್ ಮತ್ತಿತರರು ಇದ್ದರು.
(ಸಿಟಿಡಿ 15 ಡಿಸಿ ಆಫೀಸ್)
ಚಿತ್ರದುರ್ಗ ಡಿಸಿ ಕಚೇರಿ ಆವರಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಸ್ವಾತಂತ್ರೃ ದಿನಾಚರಣೆ ಅಂಗ ವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಡಿಸಿ ಬಿ.ಟಿ.ಕುಮಾರಸ್ವಾಮಿ,ಎಸಿ ಎಂ.ಕಾರ್ತಿಕ್,ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಮಧುಸೂದನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net