ಜನರ ಅಹವಾಲು ಆಲಿಸಿದ ಶಾಸಕ ಯತೀಂದ್ರ

24NGD3
ನಂಜನಗೂಡು ತಾಲೂಕಿನ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆಜ್ಜಿಗನಹಳ್ಳಿ ಗ್ರಾಮದಲ್ಲಿ ಶಾಸಕ ಡಾ.ಎಸ್.ಯತೀಂದ್ರ ದ್ವಿಚಕ್ರ ವಾಹನದಲ್ಲಿ ಸಂಚರಿಸಿ ಸಾರ್ವಜನಿಕ ಅಹವಾಲು ಆಲಿಸಿದರು.
Published on

ನಂಜನಗೂಡು: ತಾಲೂಕಿನ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆಜ್ಜಿಗನಹಳ್ಳಿ ಗ್ರಾಮದಲ್ಲಿ ಶಾಸಕ ಡಾ.ಎಸ್. ಯತೀಂದ್ರ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುವ ಮೂಲಕ ಸಾರ್ವಜನಿಕ ಅಹವಾಲು ಆಲಿಸಿದರು.

ಕ್ಷೇತ್ರದಲ್ಲಿ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ಅಲ್ಲಿನ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮತ್ತು ಕುಂದುಕೊರತೆಗಳನ್ನು ಆಲಿಸಲು ದ್ವಿಚಕ್ರವಾಹನದಲ್ಲಿ ತೆರಳುತ್ತೇನೆ ಎಂದು ಶಾಸಕ ಯತೀಂದ್ರ ತಿಳಿಸಿದರು. ಗ್ರಾಮದ ಎಲ್ಲ ಬೀದಿಗಳಲ್ಲಿರುವ ರಸ್ತೆ, ಚರಂಡಿ, ಕುಡಿಯುವ ನೀರಿನ ಟ್ಯಾಂಕ್ ಪರಿಶೀಲಿಸಿದರು. ಕೆಲ ಗ್ರಾಮಸ್ಥರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ತಾಯೂರು ಬಸವರಾಜು, ಮುಖಂಡರಾದ ಸಂತೋಷ್, ವಿಠಲ್, ಶಿವಣ್ಣ, ಕೆಂಪಣ್ಣ, ರಂಗಸ್ವಾಮಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net