ಜನರ ಆಶಯಕ್ಕೆ ತಕ್ಕಂತೆ ಅಭಿವೃದ್ಧಿ

28rajesh5
Published on

ಚಾಮರಾಜನಗರ: ವಿಧಾನಸಭಾ ಕ್ಷೇತ್ರದ ಜನತೆಯ ಆಶಯಗಳಿಗೆ ತಕ್ಕಂತೆ ಪ್ರಮಾಣಿಕವಾಗಿ ಅಭಿವೃದ್ಧಿ ಕೆಲಸವನ್ನು ಮಾಡಲಾಗುತ್ತಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ರಾಮಸಮುದ್ರ ಪರಿಶಿಷ್ಟ ಜಾತಿ ಚಿಕ್ಕಬೀದಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆಯಡಿಯಲ್ಲಿ 50 ಲಕ್ಷ ರೂ, ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪಟ್ಟಣಪ್ರದೇಶದಲ್ಲಿ ಈಗಾಗಲೇ ರಸ್ತೆ,ಚರಂಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನೂಕೂಲಮಾಡಿಕೊಡಲಾಗಿದೆ. ಸಾರ್ವಜನಿಕರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಕೇತ್ರವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ದರಾಗಿ ರಸ್ತೆ ಚರಂಡಿ, ಸಮುದಾಯ ಭವನ ಸೇರಿದಂತೆ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ನಗರಸಭೆ ಅಧ್ಯಕ್ಷ ಸುರೇಶ್, ನಾಗಬಸವಣ್ಣ, ಮಹದೇವಸ್ವಾಮಿ, ಮಹದೇವಪ್ರಸಾದ್, ಮರಿಸ್ವಾಮಿ, ಜಯಕುಮಾರ್, ನಾಗಣ್ಣ, ಚಲುವಮೂರ್ತಿ, ಇಂಜಿನಿಯರ್ ಭೀಮ್‌ಸಾಗರ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net