

ಕಲಬುರಗಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರಕ್ಕೆ, ಬೆಲೆ ಏರಿಕೆಗೆ, ಜನವಿರೋಧಿ ಕಾಂಗ್ರೆಸ್‌ಗೆ, ಕಂಗಾಲಾಗಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಕೂಡಲೇ ಹೆಚ್ಚಳ ಮಾಡಿರುವ ತೆರಿಗೆ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ್ದು, ಕನಿಷ್ಠ ಅಭಿವೃದ್ಧಿ ಕೆಲಸಗಳನ್ನು ಮಾಡಲೂ ಹಣವಿಲ್ಲದಂತ ದುಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಜನವಿರೋಧಿ ನೀತಿ ಕೈಬಿಡಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಸರ್ಕಾರದಿಂದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿ, ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಹೆಚ್ಚಿಸಿರುವ ತೆರಿಗೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉÃವಾಡಗಿ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ, ಪ್ರಮುಖರಾದ ಅವ್ವಣ್ಣ ಮ್ಯಾಕೇರಿ, ಶರಣಪ್ಪ ತಳವಾರ, ಉಮೇಶ ಪಾಟೀಲ್, ಮಹಾದೇವ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಬಾಬುರಾವ ಚವ್ಹಾಣ್, ಶಿವಕಾಂತ ಮಹಾಜನ, ಗಿರಿರಾಜ ಯಳಮೇಲಿ, ದಿಲೀಪ ಪಾಟೀಲ್, ಹರ್ಷಾನಂದ ಗುತ್ತೇದಾರ, ಸುರೇಶ ಸಜ್ಜನ, ರಾಜು ಪಾಟೀಲ್ ನಾಗನಳ್ಳಿ, ಮಹೇಶ ರೆಡ್ಡಿ, ಶಿವಯೋಗಿ ನಾಗನಳ್ಳಿ, ಶೋಭಾ ಪಾಟೀಲ್, ಬಸವರಾಜ ಮಾಲಿಪಾಟೀಲ್, ಶಶಿಧರ ಸೂಗೂರ, ವಿಜಯಲಕ್ಷಿö್ಮÃ ಗೊಬ್ಬುರಕರ, ಸುಧಾ ಹಾಲಕಾಯಿ, ಮಹೇಶ ಗೌಳಿ, ಮಹೇಶ ಚವ್ಹಾಣ್, ವೀರೇಶ ನೀಲಾ, ಶ್ರೀಧರ ಚವ್ಹಾಣ್, ಜಗದೇವ ಗುತ್ತೇದಾರ, ಶಿವಶರಣಪ್ಪ ಶಂಕರ, ಓಂ ಪ್ರಕಾಶ ಪಾಟೀಲ್, ನಾಗೇಂದ್ರಪ್ಪ ಕೊಳ್ಳಿ, ಬಾಬುರಾವ ಹಾಗರಗುಂಡಗಿ ಇತರರಿದ್ದರು.