ಜನರ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಲಿ

AMARNATH PATIL
Published on

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೧೧ ತಿಂಗಳಾದರೂ ಅಭಿವೃದ್ಧಿ ಮಾಡದೆ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ರಾಜ್ಯಕ್ಕೆ ಪ್ರಚಾರಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯಗೆ ಕೇಳಲಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್ ಆಗ್ರಹಿಸಿದರು.
ರಾಜ್ಯ ಸರ್ಕಾರವೂ ಆರ್ಥಿಕವಾಗಿ ದಿವಾಳಿಯಾಗಿದ್ದು, ನೌಕರರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿದೆ. ೧೧ ತಿಂಗಳಲ್ಲಿ ರಾಜ್ಯದ ೬೯೨ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ರಾಹುಲ್ ಗಾಂಧಿ ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡು ಪ್ರಚಾರ ಮಾಡಲಿ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟು ರೈತರಿಗೆ ದ್ರೋಹ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬ್ರಾÈಂಡ್ ಬೆಂಗಳೂರು ಬಾಂಬ್ ಬೆಂಗಳೂರು ಆಗುತ್ತಿದೆ. ಬಿಜೆಪಿ, ಹಿಂದು ಕಾರ್ಯಕರ್ತರ ಕೊಲೆಗಳಾಗುತ್ತಿವೆ. ಮಹಿಳೆಯನ್ನು ಬೆತ್ತಲೆ ಮಾಡುವ ಹೀನ ಕೃತ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುತ್ತಾರೆ, ಪಾಕಿಸ್ತಾನ ಶತ್ರು ರಾಷ್ಟçವಲ್ಲ, ನೆರೆ ರಾಷ್ಟç ಎನ್ನುತ್ತಾರೆ. ಇದನ್ನು ಖಂಡಿಸುವ ಧೈರ್ಯ ರಾಹುಲ್ ತೋರಲಿ. ಶೇ.೬೦ ಕಮೀಷನ್ ಆರೋಪ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ. ರೈತರಿಗೆ ಸೌಲಭ್ಯ ನೀಡುತ್ತಿಲ್ಲ. ವಿದ್ಯುತ್, ನೋಂದಣಿ, ಎಸ್ ಆರ್ ವ್ಯಾಲ್ಯೂ ದರ ಹೆಚ್ಚಿಸುತ್ತಿದ್ದು, ಇದಕ್ಕೆ ಉತ್ತರ ನೀಡಿ, ರಾಹುಲ್ ಗಾಂಧಿ ಕರ್ನಾಟಕದಲ್ಲಿ ಮತ ಕೇಳಲಿ ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್, ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ, ನಾಗರಾಜ ಮಹಾಗಾಂವ್ ಇದ್ದರು.

371(ಜೆ) ಸೌಲಭ್ಯಕ್ಕೆ ಕಾಂಗ್ರೆಸ್ಸ ಚಿವ ಎಚ್‌ಕೆ ಪಾಟೀಲ್ ಕುತ್ತು: ಕಲ್ಯಾಣ ಕರ್ನಾಟಕ ಭಾಗದ ಹಲವು ನಾಯಕರ, ಸಂಘಟಕರ ಹೋರಾಟದ ಫಲದಿಂದ ೩೭೧(ಜೆ) ಜಾರಿಯಾಗಿದ್ದು, ಅದರ ಫಲವನ್ನು ಕಿತ್ತುಕೊಳ್ಳಲು ಕಾಂಗ್ರೆಸ್‌ನ ಹಿರಿಯ ಸಚಿವ ಎಚ್.ಕೆ.ಪಾಟೀಲ್ ಸಂಚು ಹೂಡಿದ್ದಾರೆ. ೩೭೧(ಜೆ) ಅಡಿ ನೇಮಕಾತಿಗಳಿಂದ ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಮೊಸಳೆ ಕಣ್ಣೀರು ಹಾಕಿ. ನೇಮಕ ಪ್ರಕ್ರಿಯೆಗಳನ್ನು ತಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದು ಈ ಭಾಗಕ್ಕೆ ಕಾಂಗ್ರೆಸ್ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಖಂಡಿಸಿದರು. ಕೂಡಲೇ ನಮ್ಮ ಭಾಗದ ಕಾಂಗ್ರೆಸ್ ಸಚಿವರು ಆ ಪತ್ರ ವಾಪಸ್ ಪಡೆದು, ಎಚ್.ಕೆ.ಪಾಟೀಲ್ ಕ್ಷಮೆ ಯಾಚಿಸಲು ಒತ್ತಡ ಹೇರಬೇಕು. ಜಿಲ್ಲೆಯ ಸಚಿವರು ಸ್ಪಷ್ಟನೆ ನೀಡಬೇಕು ಎಂದು ಅಮರನಾಥ ಪಾಟೀಲ್ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net