

ಬೇಲೂರು; ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಹಾಯ ಮಾಡಿದರೆ ಮತ್ತೊಬ್ಬರ ಸಹಾಯಕ್ಕೆ ಇತರರು ಮುಂದಾಗುತ್ತಾರೆ ಎನ್ನುವುದಕ್ಕೆ ಇಲ್ಲಿಯ ಜನತೆಯೇ ಸಾಕ್ಷಿ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ರಾಜಗೆರೆ ಗ್ರಾಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ಬುಧವಾರ ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಈಗಿನ ಕಾಲಮಾನ ಸಂಪೂರ್ಣ ಬದಲಾಗುತ್ತಿದೆ. ಯಾರಿಗಾದರೂ ಅಪಘಾತವಾದರೆ ಅವರ ಫೋಟೋಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡುತ್ತಾರೆ. ಆದರೆ ಇಲ್ಲಿನ ಜನತೆ ನಿಜಕ್ಕೂ ಹೃದಯವಂತರು. ಯಾರಾದರೂ ಕಷ್ಟದಲ್ಲಿದ್ದರೆ ಅವರಿಗಾಗಿ ನಿಲ್ಲುತ್ತಾರೆ. ಈ ಭಾಗದ ಜನರ ಸೇವೆ ಮಾಡುವುದೇ ಒಂದು ಭಾಗ್ಯ ಎಂದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ರಾಜ್ಯದಲ್ಲಿ ಸಮಸ್ಯೆಗಳ ಸಂಖ್ಯೆ ಕಡಿಮೆ ಇದೆ. ಬೇಲೂರಿನಲ್ಲಿಯೂ ಬಿಜೆಪಿ ಅಸ್ತಿತ್ವಕ್ಕೆ ಬಂದರೆ ಹೆಚ್ಚಿನ ಅನುದಾನ ತಂದು ಕೆಲಸ ಮಾಡಿಸಬಹುದು ಎಂದರು.