

ಮೈಸೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ರಾಜ್ಯದ ಮೂಲ ನಿವಾಸಿಯಾದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶುಲ್ಕ ರಹಿತ ಅರ್ಜಿಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 30ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂ. 08212-2425240 ಸಂಪರ್ಕಿಸಬಹುದು.
ಶಿಷ್ಯ ವೇತನಕ್ಕಾಗಿ ಅರ್ಜಿ
ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿರಹಿತ ರಾಜ್ಯದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಹೊರ ರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ (ಅಧಿಕಾರಿಗಳನ್ನು ಹೊರತುಪಡಿಸಿ) ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶುಲ್ಕರಹಿತ ಅರ್ಜಿಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆ.30ರೊಳಗಾಗಿ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗಾಗಿ ದೂ. 08212-2425240 ಸಂಪರ್ಕಿಸಬಹುದು.