ಜನರಲ್ಲಿ ಶೌಚ ಬಳಕೆ ಜಾಗೃತಿ

21mnv01
Published on

ಮಾನ್ವಿ: ಹಳ್ಳಿಗಳ ಬಯಲು ಪ್ರದೇಶದಲ್ಲಿ ಬಯಲು ಶೌಚ ಪದ್ಧತಿ ಇನ್ನೂ ಇದ್ದು, ಬಯಲು ಶೌಚ ತಪ್ಪಿಸಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಕರಾಬದಿನ್ನಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಕಾರ್ಯಾಲಯದಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ವಚ್ಛ ಭಾರತ ಮಿಷನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶೌಚಗೃಹ ಜಾಗೃತಿ ಅಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಡಿ.10 ರವರೆಗೆ ‘ನಮ್ಮ ಶೌಚಾಲಯ ನಮ್ಮ ಗೌರವ’ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ಶೌಚ ಬಳಸುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.

ತಾಲೂಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಧೀರ್ ಬಾಬು, ಸಮುದಾಯ ಆರೋಗ್ಯ ಅಧಿಕಾರಿ ಸೋನಾಲಿಶ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಬಸ್ಸಮ್ಮ. ರೇಣುಕಾ, ವಿಶ್ವರಾಧ್ಯ, ಆಶಾ ಕಾರ್ಯಕತೆರ್ಯರಾದ ಶಿಲ್ಪಾ, ಮರಿಯಮ್ಮ, ಪ್ರಭಾದೇವಿ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net