ಜನರಿಗೆ ಶೀಘ್ರ ಸೇವೆ ಒದಗಿಸಲಿ

2ckd2
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 61.0; hist255: 0.0; hist252~255: 0.0; hist0~15: 0.0;
Published on

ಚಿಕ್ಕೋಡಿ: ಕಂದಾಯ ಇಲಾಖೆಯ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಉಚಿತವಾಗಿ ಲ್ಯಾಪ್‌ಟ್ಯಾಪ್‌ಗಳನ್ನು ವಿತರಿಸಲಾಗುತ್ತಿದೆ. ಅವುಗಳ ಪ್ರಯೋಜನ ಪಡೆದು ಸಾರ್ವಜನಿಕರಿಗೆ ಶೀಘ್ರ ಸೇವೆ ಒದಗಿಸಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ರಾಯಬಾಗ ವಿಧಾನ ಸಭೆ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳಿಗೆ ಈಚೆಗೆ ಲ್ಯಾಪ್‌ಟ್ಯಾಪ್ ವಿತರಿಸಿ ಮಾತನಾಡಿ, ಪ್ರತಿನಿತ್ಯ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿಗಳಿಗೆ ಟಪಾಲು ಕೊಡುವುದು ಮತ್ತು ತೆಗೆದುಕೊಳ್ಳುವುದು ಕೆಲಸವಾಗಿದ್ದರಿಂದ ಕೆಲಸವನ್ನು ಬಿಟ್ಟು ಓಡಾಟದಲ್ಲೇ ಸಮಯ ವ್ಯರ್ಥವಾಗುತ್ತಿದೆ. ಹೀಗಾಗಿ ಅನಗತ್ಯ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಹೇಳಿದರು.

ತಹಸೀಲ್ದಾರ್ ಚಿದಂಬರ ಕುಲಕರ್ಣಿ ಮಾತನಾಡಿ, ಲ್ಯಾಪ್‌ಟ್ಯಾಪ್‌ಗಳನ್ನು ಪ್ರಥಮ ಹಂತದಲ್ಲಿ ದೊಡ್ಡ, ದೊಡ್ಡ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಕೆಲಸದ ಒತ್ತಡವಿರುವ ಕಡೆ ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಎಲ್ಲರಿಗೂ ಲ್ಯಾಪ್‌ಟ್ಯಾಪ್ ನೀಡಲಿದೆ ಎಂದರು.

ಗ್ರೇಡ್-೨ ತಹಸೀಲ್ದಾರ್ ಕಿರಣ ಬೆಳವಿ, ಉಪ ತಹಸೀಲ್ದಾರ್ ಪಿ.ಬಿ.ಶಿರಿವಂತ, ನಾಗರಮುನ್ನೊಳಿ ಉಪತಹಸೀಲ್ದಾರ್, ಎಂ.ಆರ್.ಮೇತ್ರಿ, ಶಿರಸ್ತೇದಾರ ಪಿ.ಬಿ.ಸೋಲಾಪುರೆ, ಜಿ.ಸರಿತಾ, ಕಂದಾಯ ನಿರೀಕ್ಷಕ ಡಿ.ಎಸ್.ವಟಗುಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net