ಜನರಿಗೆ ಹಣ ನೀಡಿ ಮತ ಸೆಳೆಯಲು ಹೊಂಚು

31 bdvt 02
Published on

ಭದ್ರಾವತಿ: ಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಚುನಾವಣಾ„ಕಾರಿ ರವಿಚಂದ್ರನಾಯಕ್ ಅವರಿಗೆ ಶುಕ್ರವಾರ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಮನವಿ ಸಲ್ಲಿಸಿ ಒತ್ತಾಯಿಸಿದರು. ಇತ್ತೀಚೆಗಿನ ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಸ್ಪರ್„ಸಿದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಲ್ಲಿನ ಮತದಾರರಿಗೆ ಹಣವನ್ನು ನೇರವಾಗಿ ನೀಡದೆ ಫೆÇೀನ್ ಪೇ, ಗೂಗಲ್ ಪೇ ಮೂಲಕ ಹಣವನ್ನು ವರ್ಗಾಯಿಸಿ ಅಕ್ರಮ ಎಸೆಗಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆ ಬಳಸಿಕೊಂಡು ಮತದಾರರಿಗೆ ಹಣ ನೀಡಿ ಚುನಾವಣೆ ನಡೆಸುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಹಾಗಾಗಿ ಕೂಡಲೆ ಚುನಾವಣಾ„ಕಾರಿಗಳು ಎಚ್ಚತ್ತು ಲೀಡ್ ಬ್ಯಾಂಕ್ ಮುಖ್ಯಸ್ಥರ ಸಭೆ ಕರೆದು ರಾಜ್ಯದ ಎಲ್ಲ ಬ್ಯಾಂಕ್‍ಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಆನ್‍ಲೈನ್ ಹಣ ವರ್ಗಾವಣೆಯ ಸಂಪೂರ್ಣ ಮಾತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಚಿಸಬೇಕು. ಈ ಮೂಲಕ ಹಣ ಅಕ್ರಮವಾಗಿ ಮತದಾರರಿಗೆ ತಲುಪದ ರೀತಿ ಎಚ್ಚರಿಕೆ ವಹಿಸಬೇಕು. ರಾಜ್ಯದಲ್ಲಿನ ಎಲ್ಲ ಗ್ರಾಮ ಹಾಗೂ ನಗರ ಪ್ರದೇಶಗಳ ರಸ್ತೆಗಳಿಗೆ ಸಿಸಿ ಕ್ಯಾಮೆರ ಅಳವಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net