ಜನರಿಗೋಸ್ಕರ ಗ್ಯಾರಂಟಿ ನಿರಂತರ

1
Published on

ಮೂಡಲಗಿ: ತಾಲೂಕಿನ ಜನರ ಹೃದಯ ಸೌಹಾರ್ದತೆ ಮೆಚ್ಚುವಂತಹದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಹೇಳಿದರು.

ಪಟ್ಟಣದ ಮಡ್ಡಿ ವೀರಭದ್ರೇಶ್ವರ ಜಾತ್ರಾ ರಥೋತ್ಸವದ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಸತ್ಸಂಗ ಸಮ್ಮೇಳನದಲ್ಲಿ ಮಾತನಾಡಿದರು. ಭಾರತ ಅತ್ಯಂತ ಶ್ರೀಮಂತ ಇತಿಹಾಸ ಹೊಂದಿದ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ನಮ್ಮ ಸಂಸತಿ ಕಣ್ಣಿಗೆ ರಾಚುತ್ತದೆ ಎಂದರು. ರಾಜ್ಯ ಕಾಂಗ್ರೆಸ್​ ಸರ್ಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರಿಗೋಸ್ಕರ ಮುಂದುವರಿಸಲಾಗಿದೆ. ಕಾಂಗ್ರೆಸ್​ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದರು. ಸೆ.3ರಂದು ವೀರಭದ್ರೇಶ್ವರ ಜಯಂತಿಯನ್ನು ಎಲ್ಲರೂ ಆಚರಣೆ ಮಾಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್​ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್​ ಮಾತನಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುಧೋಳದ ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಕಾಂಗ್ರೆಸ್​ ಮುಖಂಡರಾದ ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ದೇವಸ್ಥಾನದ ಅಧ್ಯ ಭೀಮಪ್ಪ ಹಂದಿಗುಂದ, ಭೀಮಪ್ಪ ಗಡಾದ, ಬಿ.ಬಿ.ಬೆಳಕೊಡ, ಲಗಮಣ್ಣ ಕಳಸಣ್ಣವರ, ರಾವಸಾವ ಬೆಳಕೊಡ, ನಿಂಗಪ್ಪ ಪಿರೋಜಿ, ಎಂ.ಜಿ.ಗಾಣಿಗೇರ ಹಾಗೂ ದೇವಸ್ಥಾನ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net