ಜನವಾಡ ಗ್ರಾಪಂಗೆ ರಮೇಶ ಅಧ್ಯಕ್ಷ

Janwada
Published on

ಬೀದರ್: ತಾಲೂಕಿನ ಜನವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಮೇಶ ಮಾಣಿಕ ಹಾಗೂ ಉಪಾಧ್ಯಕ್ಷರಾಗಿ ಪ್ರೀತಿ ದಾದಾರಾವ್ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಸೋಮವಾರ ಚುನಾವಣೆ ನಡೆಯಿತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿದ ಬಿಜೆಪಿ ಬೀದರ್ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಜನವಾಡ ಸೇರಿದಂತೆ ಬೀದರ್ ಗ್ರಾಮಾಂತರ 10 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿತರು ಚುನಾಯಿತರಾಗಿದ್ದಾರೆ ಎಂದು ಹೇಳಿದರು.

ರಾಜಕೀಯ ತಾರತಮ್ಮ ಬಿಟ್ಟು ಚುನಾಯಿತ ಪ್ರತಿನಿಧಿಗಳು ತಮ್ಮ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಪ್ರಮುಖರಾದ ಲಕ್ಷ್ಮಣ ರಾಠೋಡ್, ಸಂತೋಷ ಕಾಳೆ, ಶಾಂತಕುಮಾರ ಪನ್ಸಾಲೆ, ರಾಜಕುಮಾರ ಪಾಂಡ್ರೆ, ದಶರಥರಾವ ಕರಾಥ್, ನರಸಿಂಗರಾವ ರೂಪನರ್, ತಾಪಂ ಸದಸ್ಯ ರವಿ ಭಂಗೆ ಸೇರಿದಂತೆ ಗ್ರಾಪಂ ಸದಸ್ಯರು, ಸ್ಥಳೀಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net