ಜನಸಂಕಲ್ಪ ಯಾತ್ರೆ ಆಟೋ ಜಾಥಾಗೆ ಚಾಲನೆ

20blrp5
ಜನ ಸಂಕಲ್ಪ ಯಾತ್ರೆ ಅಂಗವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಟಿಕೆರೆ ಪ್ರಕಾಶ್ ನಿವಾಸದ ಸಮೀಪ ಆಯೋಜಿಸಿದ್ದ ಆಟೋ ಜಾಥಾಗೆ ಚಾಲನೆ ನೀಡಲಾಯಿತು.
Published on

ಬೇಲೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆ.21ರಂದು ನಡೆಯಲಿರುವ ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಟಿಕೆರೆ ಪ್ರಕಾಶ್ ನಿವಾಸದ ಸಮೀಪ ಆಯೋಜಿಸಿದ್ದ ಆಟೋ ಜಾಥಾಗೆ ಸೋಮವಾರ ಕಾರ್ಯಕರ್ತರು ಚಾಲನೆ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಟಿಕೆರೆ ಪ್ರಕಾಶ್ ಮಾತನಾಡಿ, ಬೇಲೂರಿನಲ್ಲಿ ಜನ ಸಂಕಲ್ಪ ಯಾತ್ರೆ ಬೃಹತ್ ಸಮಾವೇಶ ಆಯೋಜಿಸಲಾಗಿದೆ. 15 ದಿನಗಳಿಂದ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಯಾತ್ರೆ ಬಗ್ಗೆ ಜನರಿಗೆ ತಿಳಿಸಲಾಗಿದೆ. ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ. ಪಕ್ಷ ಸಂಘಟನೆ, ಪದಾಧಿಕಾರಿಗಳು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬುವ ನಿಟ್ಟಿನಲ್ಲಿ ಸಮಾವೇಶ ಶಕ್ತಿ ತುಂಬಲಿದೆ.

ಅಲ್ಲದ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ವಿವಿಧ ಮೋರ್ಚಾ, ಮಂಡಲದ ಮುಖಂಡರು ಭಾಗವಹಿಸಲಿದ್ದಾರೆ. ಈ ಮೂಲಕ ಬೇಲೂರು ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತರಲಾಗುವುದು ಎಂದರು. ಈ ಸಂದರ್ಭ ಬಿಜೆಪಿ ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net