

ಅಳವಂಡಿ: ಸಮೀಪದ ಮುರ್ಲಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕವಲೂರುವತಿಯಿಂದ ವಿಶ್ವ ಜನಸಂಖ್ಯಾ ದಿನವನ್ನು ಶುಕ್ರವಾರ ಆಚರಿಸಲಾಯಿತು.
ಆರೋಗ್ಯ ನೀರಿಕ್ಷಣಾಧಿಕಾರಿ ವಸಂತ ಗದ್ದಿಕೇರಿ ಮಾತನಾಡಿ, ಜಾಗತಿಕ ಜನಸಂಖ್ಯೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜು.11 ರಂದು ವಿಶ್ವಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ. ಜನಸಂಖ್ಯೆ ಹೆಚ್ಚಾದಂತೆ ಆರೋಗ್ಯ , ಮೂಲ ಸೌಕರ್ಯ ಕಲ್ಪಿಸಲು ಸಮಸ್ಯೆಯಾಗಲಿದೆ ಎಂದರು.
ಕುಟುಂಬ ಯೋಜನೆ, ಲಿಂಗ ಸಮಾನತೆ, ಮಾನವ ಹಕ್ಕುಗಳು, ತಾಯಿಯ ಆರೋಗ್ಯ, ಮಕ್ಕಳ ಆರೋಗ್ಯ, ಗರ್ಭ ನಿರೋಧಕ, ಮಕ್ಕಳ ನಡುವಿನ ಅಂತರದ ಬಗ್ಗೆ ಮಾಹಿತಿ ನೀಡಲಾಯಿತು. ಆರೋಗ್ಯ ಸುರಕ್ಷತಾಧಿಕಾರಿ ಸುಜಾತಾ ಇಟಗಿ, ಯಲ್ಲಮ್ಮ, ಆಶಾ ದೇವಮ್ಮ, ಗ್ರಾಮಸ್ಥರಾದ ಚೈತ್ರಾ, ಕವಿತಾ, ಲಲಿತಾ ಇತರರರಿದ್ದರು.