ಜನಸೇವಕರಿಗೆ ಅವಕಾಶ

ctd 0004
Published on

ಚಿತ್ರದುರ್ಗ : ಜನಸೇವೆ ಮಾಡುವವರಿಗೆ ದೊಡ್ಡ ಪಕ್ಷಗಳಲ್ಲಿ ಜಾಗವಿಲ್ಲವೆಂದು ಇಂಡಿಯನ್ ಮೂವ್‌ಮೆಂಟ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಡಾ.ಅಬ್ದುಲ್‌ಸುಬಾನ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಜ ಜನಸೇವಕರನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸುವ ಉದ್ದೇಶ ತಮ್ಮ ಪಕ್ಷಕ್ಕಿದೆ ಎಂದರು.
ಪಕ್ಷದ ರಾಷ್ಟ್ರೀಯ ಕಾರ‌್ಯಾಧ್ಯಕ್ಷ ಜಿ.ವಿ.ರಾಮಚಂದ್ರಪ್ಪ ಮಾತನಾಡಿ, ರಾಜಕಾರಣದಲ್ಲಿ ತತ್ವ-ಸಿದ್ಧಾಂತಗಳು ಮರೆಯಾಗುತ್ತಿವೆ. ಬಿಹಾರದ ಸಿಎಂ ನಿತೀಶ್ ಕುಮಾರ್,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಅಸ್ತಿತ್ವಕ್ಕಾಗಿ ನಿಲುವುಗಳನ್ನು ಬದಲಾಯಿಸುತ್ತಿದ್ದಾರೆ ಎಂದು ವಿಷಾದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net