

ಮಡಿಕೇರಿ: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಜಿಲ್ಲೆಯ ಜನತೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕು ಎಂದು ಅಭ್ಯರ್ಥಿ ಹರೀಶ್.ಜಿ.ಆಚಾರ್ಯ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ವ್ಯಕ್ತಿಯು ಹಣವಿಲ್ಲದೆ ಚುನಾವಣೆಯಲ್ಲಿ ಪಾಲ್ಗೊಳ್ಳಬಹುದು ಮತ್ತು ಯಾವ ರೀತಿ ಅಭಿವೃದ್ಧಿ ಮಾಡಿ ತೋರಿಸಬೇಕೆಂದು ಯೋಚಿಸಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಮೂರು ವಿಧಾನಸಭಾ ಕ್ಷೇತ್ರಗಳನ್ನು ಜನಸಂಖ್ಯೆ ಆಧಾರದ ಮೇಲೆ ಎರಡು ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದೆ. ಇದನ್ನು ಮತ್ತೆ ಮೂರು ವಿಧಾನಸಭಾ ಕ್ಷೇತ್ರವಾಗಿ ಮಾಡಲು ಹೋರಾಡುವುದಾಗಿ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬೆಂಬಲಿಗರಾದ ಚೌರೀರ ರಮೇಶ್, ರವಿ ಗುರುಸ್ವಾಮಿ, ರವಿ ಉಪಸ್ಥಿತರಿದ್ದರು.