ಜನಿವಾರ ತೆಗೆಸಿದ್ದು ತಪ್ಪು

abbayya prasad
Published on

ಹುಬ್ಬಳ್ಳಿ: ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಯಾವುದೇ ಜಾತಿ, ಧರ್ಮ, ಪದ್ಧತಿ, ಸಂಸ್ಕೃತಿ, ಆಚಾರ ವಿಚಾರಗಳಿಗೆ ಧಕ್ಕೆ ಆಗದಂತೆ ಪ್ರತಿಯೊಬ್ಬರು ಗೌರವದಿಂದ ನಡೆದುಕೊಳ್ಳಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿವದಾರ, ಜನಿವಾರ, ಕುಂಕುಮ, ಬಳೆ, ಹಿಜಾಬ್, ಬುರ್ಕಾ ಹೀಗೆ ಆಯಾ ಜಾತಿ ಧರ್ಮದ ಪದ್ಧತಿಯಂತೆ ತೊಡುತ್ತಾರೆ. ಅವುಗಳಿಗೆ ಎಲ್ಲರೂ ಗೌರವ ಕೊಡಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ. ಬಿಜೆಪಿ ಆಡಳಿತ ಇರುವ ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 23 ಜನ, ಓರ್ವ ಯುವತಿ ಮೇಲೆ ಒಂದು ವಾರ ಕಾಲ ನಿರಂತರ ಅತ್ಯಾಚಾರ ಮಾಡಿದ ಹೇಯ ಪ್ರಕರಣ ಘಟಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಬೆಲ್ಲದ ಅವರು ಇತ್ತೀಚೆಗೆ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಬಜೆಟ್​ಗಳ ಬಗ್ಗೆ ಗುಣಗಾನ ಮಾಡಿದ್ದರು. ಅಲ್ಲಿ ದಲಿತ ಸಮುದಾಯಕ್ಕೆ ಬಜೆಟ್​ನಲ್ಲಿ ಯಾವ ರೀತಿ ಅನ್ಯಾಯ ಮಾಡಿದ್ದಾರೆ ಎಂಬುದನ್ನು ಅವರು ತೆಗೆದು ನೋಡಲಿ. ಅಲ್ಲದೆ ಅಲ್ಲಿಯ ಕ್ರೖೆಂ ರೇಟ್ ಕೂಡ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net