ಜನ್ನ ಸ್ನೇಹಿ ಆಡಳಿತಕ್ಕೆ ಪೂರಕ

CTD 1 DC-MLA--05
Published on

ಚಿತ್ರದುರ್ಗ: ಜನಸ್ನೇಹಿ ಆಡಳಿತಕ್ಕೆ ಪೂರಕವಾಗಿ ಈ ಕೇಂದ್ರ ಸ್ಥಾಪಿಸಲಾಗಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಸ್ಥಾಪಿಸಿರುವ ಶಾಶ್ವತ ಅರ್ಜಿ ಸ್ವೀಕೃತಿ ಕೇಂದ್ರಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಡಿಸಿ ಟಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕುಗಳ ದೂರದೂರುಗಳಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಅಧಿಕಾರಿಗಳ ಭೇಟಿಗೆ ಕಾಯುವಂತಾಗಬಾರದು. ಅವರ ಸಮಯ ವ್ಯರ್ಥವಾಗಬಾರದು ಎಂಬ ಕಾರಣಕ್ಕೆ ಈ ಕೌಂಟರ್ ಸ್ಥಾಪಿಸಲಾಗಿದೆ ಎಂದರು.
ಇಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಸ್ವೀಕೃತಿ ನೀಡಲಾಗುವುದು.

ಅರ್ಜಿಗಳನ್ನು ಗಣಕೀಕರಣಗೊಳಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲು, ಅರ್ಜಿಗಳಿಗೆ ಸ್ಪಂದಿಸಲು ವಿಶೇಷ ಆದ್ಯತೆ ನೀಡಲಾಗುವುದು. ವಿಲೇವಾರಿ ಕುರಿತಂತೆ ಪ್ರತಿ ತಿಂಗಳು ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net