

ಹಾಸನ: ಶಾಸಕ ಎಚ್.ಪಿ. ಸ್ವೂರೂಪ್ ಪ್ರಕಾಶ್ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದಲ್ಲಿ ಗುರುವಾರ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ಬೆಳಗ್ಗೆ ನಗರದ ನೀರುವಾಗಿಲು ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ತಮ್ಮ ಕುಟುಂಬ ಹಾಗೂ ಅಪಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಗರದ ಎಂ ಜಿ ರಸ್ತೆಯಲ್ಲಿರುವ ಆದಿಚುಂಚನಗಿರಿ ಮಠದ ಗಣೇಶನ ದೇವಾಲಯದಲ್ಲಿಯೂ ಪೂಜೆ ಸಲ್ಲಿಸಿದ ಅವರು ಶ್ರೀ ಶಂಭುನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಅವರು, ತನ್ನ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ನೇಹಿತರು ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ಪೂಜೆ ಹಾಗೂ ಕೇಕ್ ಕತ್ತರಿಸುವ ಮೂಲಕ ಶುಭ ಕೋರಿದ್ದಾರೆ ಅವರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದರು.
ತಾನು ಕೂಡ ಕುಟುಂಬ ಸಮೇತ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದನೆ. ಜನಸೇವೆ ಮಾಡಲು ದೇವರು ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದೇನೆ. ಈ ನಾಡಿನ ಜನತೆಗೆ ಹಾಗೂ ಜಿಲ್ಲೆಯ ಜನತೆಗೆ ಒಳ್ಳೆಯ ಆಯಸ್ಸು, ಆರೋಗ್ಯ ಹಾಗೂ ಬದುಕು ಹಸನಾಗಿರಲಿ ಎಂದು ಬೇಡಿಕೊಂಡಿದ್ದೇನೆ. ರೈತರಿಗೂ ಒಳ್ಳೆಯ ಮಳೆ, ಬೆಳೆಯಾಗಿ ಸಮೃದ್ಧಿ ಜೀವನ ಸಾಗಿಸುವಂತೆ ಆಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಈ ವೇಳೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದು ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ಸನ್ಮಾನಿಸಿ, ಹುಟ್ಟುಹಬ್ಬದ ಶುಭ ಕೋರಿದರು.