ಜನ್ಮಭೂಮಿ ಸೇವೆಗೆ ಕಂಕಣಬದ್ಧರಾಗಿರಿ

NYK Basavakalyan Photo-1
Published on

ಬೀದರ್: ಜನ್ಮಭೂಮಿ ಸೇವೆಗೆ ಯುವಕರು ಸದಾ ಕಂಕಣಬದ್ಧರಾಗಿಬೇಕು ಎಂದು ತಹಶೀಲ್ದಾರ್ ಸಾವಿತ್ರಿ ಸಲಗರ ಹೇಳಿದರು.
ಬಸವಕಲ್ಯಾಣ ನಗರದಲ್ಲಿ ಆಯೋಜಿಸಿದ್ದ ಯುವ ಸಂಘಗಳ ಪ್ರಚಾರಾಂದೋಲನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜನನಿ, ಜನ್ಮಭೂಮಿ ಎಲ್ಲಕ್ಕಿಂತ ಶ್ರೇಷ್ಠ ಎಂದರು.
ಯುವ ಶಕ್ತಿಯ ಸದ್ಬಳಕೆ ಆಗಬೇಕು. ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ನಗರಸಭೆ ಆಯುಕ್ತ ಶಿವಕುಮಾರ ಹತ್ಯಾಳೆ ನುಡಿದರು.
ಯುವ ಜನರು ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ ನುಡಿದರು.
ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಯುವಕರು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ತಿಳಿಸಿದರು.
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಆ.13 ರಿಂದ 15 ವರೆಗೆ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸೋಮನಾಥ ಪೂಜಾರಿ ಸ್ವಾಗತಿಸಿದರು. ವಿದ್ಯಾನಂದ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net