ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆ

Published on

ಚಾಮರಾಜನಗರ: ದೊಡ್ಡರಾಯಪೇಟೆ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ನಗರದ ಪೌರಕಾರ್ಮಿಕರ ಬಡಾವಣೆ ನಿವಾಸಿ ಬಣ್ಣಾರಿ(40) ಮೃತ ದುರ್ದೈವಿ. ಇವರ ಶವ ಕಂಡು ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ, ಮರಣೋತ್ತರ ಪರೀಕ್ಷಗಾಗಿ ಸಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಮೃತರ ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net