ಜಮೀರ್, ಸಿದ್ದು ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

CTD STRIKE....
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.52492094, 0.5847859);sceneMode: 2621440;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

ಚಿತ್ರದುರ್ಗ: ರೈತರ ಜಮೀನು ಕಬಳಿಸಲು ರಾಜ್ಯ ವಕ್ಫ್ ಮಂಡಳಿ ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ‌್ಯಕರ್ತರು ಡಿಸಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ನೋಟಿಸ್ ನೀಡಿರುವ ವಕ್ಫ್, ಮಠ ಮಾನ್ಯ, ಚರ್ಚ್, ದೇವಸ್ಥಾನ, ದರ್ಗಾ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದೆ. ಇದರಿಂದ ತಲೆ, ತಲಾಂತರದಿಂದ ಉಳುಮೆ ಮಾಡಿಕೊಂಡು ಬದುಕುತ್ತಿರುವವರ ಬದುಕು ಬೀದಿಗೆ ಬೀಳುವಂತಾಗಿದ್ದು, ಮಂಡಳಿಯನ್ನು ಮುಚ್ಚಬೇಕು ಎಂದು ಆಗ್ರಹಿಸಿದರು.

ಪಹಣಿಯಲ್ಲಿ ವಕ್ಫ್ ಎಂದು ದಾಖಲಿಸುವಂತೆ ಅಧಿಕಾರಿಗಳನ್ನು ಬೆದರಿಸಿರುವ ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಹೇಳಿದರು.

ಸೇನೆ ಜಿಲ್ಲಾಧ್ಯಕ್ಷ ಎಂ. ತಿಪ್ಪೇಸ್ವಾಮಿ, ಪ್ರಧಾನ ಕಾರ‌್ಯದರ್ಶಿ ತ್ಯಾಗರಾಜ್, ಶರೀಫ್, ಫೈಜುಲ್ಲಾ, ಎನ್. ರಾಮು, ಅನಿಲ್, ಎಂ. ಮಂಜುನಾಥ್, ಶಿವರಾಜ್, ನಂದಕುಮಾರ್, ಮಲ್ಲಿಕಾರ್ಜುನ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net