ಜಯಂತಿ ಅರ್ಥಪೂರ್ಣ ಆಚರಿಸಿ

Published on

ಬಳ್ಳಾರಿ : ಜಿಲ್ಲಾಡಳಿತದಿಂದ ಅ. 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಸಿ ಪ್ರಮೋದ್ ಸೂಚಿಸಿದರು.
ಇಲ್ಲಿನ ಡಿಸಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅ. 23 ರಂದು ಬೆಳಗ್ಗೆ ಇಲ್ಲಿನ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಮೆರವಣಿಗೆಯು ಎಚ್. ಆರ್. ಗವಿಯಪ್ಪ ವೃತ್ತದಿಂದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ. ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು ಎಂದರು. ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net