ಜಯಂತಿ ಅರ್ಥಪೂರ್ಣವಾಗಿ ಆಚರಣೆ

24 YERRISWAMY 07
Published on

ಬಳ್ಳಾರಿ ;ಜಿಲ್ಲಾಡಳಿತದಿಂದ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ ಗೌಸಿಯಾ ಬೇಗಂ ಹೇಳಿದರು.
ನಗರದ ಡಿಸಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜೂ. 27 ರಂದು ಕೆಂಪೇಗೌಡ ಜಯಂತಿ, ಜು. 02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು. ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ ಆಹ್ವಾನ ನೀಡಬೇಕು ಎಂದರು.
ಕೆಂಪೇಗೌಡರ ಜಯಂತಿಯನ್ನು ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸರ್ಕಾರವು ಆದೇಶಿಸಿದ್ದು, ಎಲ್ಲ ಶಾಲೆಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ನಿರ್ದೆಶಿಸಿದರು.
ಮಹನೀಯರ ವಿಚಾರಧಾರೆಗಳು ಇಂದಿನ ಪೀಳಿಗೆಗೆ ತಿಳಿಯಪಡಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net