ಜಯಂತಿಗಳಿಗೆ ಕಡ್ಡಾಯವಾಗಿ ಅಧಿಕಾರಿಗಳು ಹಾಜರಾಗಬೇಕು: ಜಿಲ್ಲಾಧಿಕಾರಿ ವೆಂಕಟ್​ರಾಜಾ ಸೂಚನೆ

1
Published on

ಕೋಲಾರ: ಡಾ.ಬಾಬು ಜಗಜೀವನ್​ ರಾಮ್​ ಜಯಂತಿಯನ್ನು ಏ.5 ರಂದು ಹಾಗೂ ಡಾ.ಬಿ.ಆರ್​. ಅಂಬೇಡ್ಕರ್​ ಜಯಂತಿಯನ್ನು ಏ.14 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್​ ರಾಜಾ ತಿಳಿಸಿದರು.

ನಗರದ ಹೊರವಲಯದ ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಗಜೀವನ್​ ರಾಮ್​ ಮತ್ತು ಅಂಬೇಡ್ಕರ್​ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಯಂತಿಗಳಿಗೆ ಕಡ್ಡಾಯವಾಗಿ ಅಧಿಕಾರಿಗಳು ಹಾಜರಾಗಬೇಕು. ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಗುವುದು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಧನ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.

ಜಯಂತಿಗಳ ದಿನ ಪ್ರತಿ ಇಲಾಖೆಗಳಿಂದ ಪಲ್ಲಕ್ಕಿಗಳನ್ನು ತರಬೇಕು. ಈ ಜಯಂತಿಗಳು ಕೇವಲ ಜಾತಿಗೆ ಸೀಮಿತವಾಗದೆ ಎಲ್ಲರು ಸೇರಿ ಆಚರಿಸುವಂತಾಗಬೇಕು ಎಂದು ಸಮುದಾಯದ ಮುಖಂಡರು ಮನವಿ ಮಾಡಿದರು.

ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಸಚಿನ್​ ಘೋರ್ಪಡೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net