ಜಯೋಸ್ತುತೆ ದೇಶಭಕ್ತಿ ಗೀತೆಗಳ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರಿಗೆ ನೃತ್ಯ ನಮನ

mayur
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಇಲ್ಲಿಯ ಮಯೂರ ನೃತ್ಯ ಅಕಾಡೆಮಿ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಜಯೋಸ್ತುತೆ ದೇಶಭಕ್ತಿ ಗೀತೆಗಳ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಅ. 1ರಂದು ಮಧ್ಯಾಹ್ನ 3.30ಕ್ಕೆ ನಗರದ ಸವಾಯಿ ಗಂಧರ್ವ ಹಾಲ್​ನಲ್ಲಿ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷೆ ವಿದುಷಿ ಹೇಮಾ ವಾಘಮೋಡೆ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೃತ್ಯದ ಮೂಲಕ ದೇಶಪ್ರೇಮವನ್ನು ವ್ಯಕ್ತಪಡಿಸುವ ಕಾರ್ಯಕ್ರಮ ಇದಾಗಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ನೃತ್ಯ ನಮನ ಸಲ್ಲಿಸುವ ಸಂಭ್ರಮದಲ್ಲಿ ಅಕಾಡೆಮಿಯ 350 ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ, ದೇಶಪ್ರೇಮ ಮೂಡಿಸಲು ಇದು ಸಹಕಾರಿಯಾಗಿದೆ. 350 ಕಲಾವಿದರು ಒಟ್ಟು 34 ನೃತ್ಯಗಳನ್ನು ಪ್ರದರ್ಶಿಸುವರು. ಕಿಂಕಿಣಿಯ ನಾದ ನಿನಾದ ಜಯಘೋಷಗಳೊಂದಿಗೆ ಕಾರ್ಯಕ್ರಮ ಮೂಡಿ ಬರಲಿದೆ ಎಂದರು.

ಸಂಜೆ 5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಯೋಧ ಹಾಗೂ ಸಮಾಜ ಸೇವಕರಾದ ಶಿರಗುಪ್ಪಿಯ ಪರಶುರಾಮ ದಿವಾನದ ಹಾಗೂ ಹಿಂದುಸ್ತಾನಿ ಗಾಯಕಿ ರೇಖಾ ಹೆಗಡೆ ಅವರನ್ನು ಸನ್ಮಾನಿಸಲಾಗುವುದು. ದಕ್ಷಿಣ ಮಧ್ಯ ಕ್ಷೇತ್ರ ಪ್ರಜ್ಞಾ ಪ್ರವಾಹದ ಸಂಯೋಜಕ ರಘುನಂದನ, ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ದಿನೇಶ ವಾಘಮೋಡೆ, ಎಚ್.ಎಸ್. ಕಿರಣ, ಮಾರುತಿ ಹುಟಗಿ ಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net