ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ

Published on

ಬಳ್ಳಾರಿ : ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅ. 06 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಅ. 06 ರಂದು ಬೆಳಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರೈಲ್ವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಭೆ ನಡೆಸುವರು.ನಂತರ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಿಂದ ಹೊರಟು, ಮಧ್ಯಾಹ್ನ 03 ಗಂಟೆಗೆ ಸಿರಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ನಾಗನಾಥೇಶ್ವರ ದೇವಾಲಯ ಆವರಣದಲ್ಲಿ ಏರ್ಪಡಿಸಲಾದ ಡಾ. ಶ್ರೀಶಿವಕುಮಾರ ಸ್ವಾಮಿಜೀ ಸಿದ್ದಗಂಗಾ ಆಧಾರಿತ ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 03.45 ಗಂಟೆಗೆ ಸಿರಿಗೇರಿ ಗ್ರಾಮದಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಪ್ರಯಾಣಿಸುವರು. ಸಿಂಧನೂರಿನಲ್ಲಿ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸಂಜೆ 07 ಗಂಟೆಯಿಂದ ಸಿಂಧನೂರಿನಿಂದ ಮರಳಿ ಬಳ್ಳಾರಿಗೆ ಆಗಮಿಸುವರು. ಬಳಿಕ ರಾತ್ರಿ 10.55 ಗಂಟೆಗೆ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಸಹಾಯಕ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net