ಜಲಮೂಲ ಸಂರಕ್ಷಣೆಗೆ ಮುಂದಾಗಿ,ನ್ಯಾಯಾಧೀಶ

CTD JALA JATA-....
Published on

ಚಿತ್ರದುರ್ಗ: ಜಲಮೂಲ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಹೇಳಿದರು.

ವಿಶ್ವ ಜಲದಿನ ‘ಹಿಮನದಿ ಸಂರಕ್ಷಣೆ’ ಘೋಷವಾಕ್ಯದಡಿ ಒನಕೆ ಒಬವ್ವ ವೃತ್ತದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ಜಾಥಾದಲ್ಲಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮನುಷ್ಯನ ಮೂಲ ಹಕ್ಕು ಎಂದು ಸುಪ್ರೀಂಕೋರ್ಟ್ ಘೋಷಿಸಿದೆ. ನೀರಿನ ಮೂಲಗಳನ್ನು ರಕ್ಷಣೆ ಮಾ ಡ ಬೇಕು,ಜಲ ಮೂಲಗಳ ಸಂರಕ್ಷಣೆ ಕುರಿತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಮುಂದಿನ ಪೀಳಿಗೆಗೆ ನೀರನ್ನು ಸಂರಕ್ಷಿಸುವುದು,ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಈ ಸಮಿತಿಗಳ ಮುಖ್ಯ ಉದ್ದೇಶವಾಗಿದೆ. ಯುವ ಪೀಳಿಗೆಗೆ ಈ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ಈ ಕಾರ‌್ಯಕ್ರಮ ಸಹಕಾರಿಯಾಗಿದೆ ಎಂದರು.

ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಆಸಿಫ್‌ಖಾನ್ ಮಾತನಾಡಿ,ಜಾಗತಿಕ ತಾಪಮಾನದಿಂ ದ ಹಿಮಾಲಯದಲ್ಲಿ ಹಿಮನದಿಗಳು ಹರಿಯುತ್ತಿವೆ,ಜಲ ಮೂಲಗಳು ಬತ್ತಿಹೋಗುತ್ತಿವೆ. ಈ ಕಾರಣದಿಂದ ಜಾಗತಿಕವಾಗಿ ಜಲ ಮೂಲ ಗಳ ಸಂರಕ್ಷಣೆಗಾಗಿ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದರು.

ಪರಿಸರ ಜಾಥಾಕ್ಕೆ ಚಾಲನೆ

ಕಾರ‌್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಜಾಥಾಕ್ಕೆ ನಗರದ ಶ್ರೀ ನೀಲಕಂಠೇಶ್ವರ ದೇವಾಲಯದ ಬಳಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ ಯಾಧೀಶ ರೋಣ್‌ವಾಸುದೇವ ಹಾಗೂ ಎಡಿಸಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು. ದೇವಾಲಯದಿಂದ ಆರಂಭವಾದ ಜಾಥಾ ಜಾಥಾ ಗಾಂಧಿ ವೃತ್ತ,ಬಿಡಿ ರಸ್ತೆ,ಪ್ರವಾಸಿ ಮಂದಿರ ಮಾರ್ಗ ಒನಕೆ ಓಬವ್ವ ವೃತ್ತ ತಲುಪಿತು. ಅಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಜಾಥಾದಲ್ಲಿ ಘೋಷವಾಕ್ಯಗಳಿದ್ದ ಫಲಕಗಳನ್ನು ಹಿಡಿದಿದ್ದ ವಿದ್ಯಾರ್ಥಿಗಳು ಜಲ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳ ಮೂಲಕ ಜನ ರಲ್ಲಿ ಅರಿವು ಮೂಡಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್,ನಗರಸಭೆ ಪೌರಾಯುಕ್ತೆ ಎಂ.ರೇಣುಕಾ,ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾಧಿಕಾರಿ ಎನ್.ಸುಹಾಸ್,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ ಖೆ ಅಧಿಕಾರಿ ಪವಿತ್ರಾ,ಕೆಎಸ್‌ಆರ್‌ಟಿಸಿ ಡಿಸಿ ವೆಂಕಟೇಶ್,ಕಾರ್ಮಿಕ ಅಧಿಕಾರಿ ಅನಿಲ್ ಬಿ.ಬಗಟಿ,ಉಪ ಪರಿಸರ ಅಧಿಕಾರಿ ರಾಜೇಶ್,ಕೆರೆ ಸಂರಕ್ಷಣಾ ಪ್ರಾಧಿಕಾರದ ಎಇ ಮಲ್ಲಿಕಾರ್ಜುನ್,ಜಿಲ್ಲಾ ಅಂತರ್ಜಲ ಕಚೇರಿ ಹಿರಿಯ ಭೂ ವಿಜ್ಞಾನಿ ವಿ.ಬಸಂತ್ ಮತ್ತಿತರರು ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ,ನೆಹರು ಯುವ ಕೇಂದ್ರ ಹಾಗೂ ನಗರಸಭೆ ಸಹಯೋಗದಲ್ಲಿ ಜಾಥಾ ಆಯೋಜಿಸಲಾಗಿತ್ತು.

ಕೋಟ್

ವಿಶ್ವ ಜಲ ದಿನವನ್ನು ವರ್ಷಕ್ಕೊಮ್ಮೆ ಸೀಮಿತ ಮಾಡದೆ ಪ್ರತಿ ದಿನವೂ ಆಚರಿಸುವಂತಾಗಬೇಕು. ಜಲ ಮೂಲಗಳ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳು, ಯುವ ಸಮೂಹದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ.

ಡಾ.ಎಂ.ಜೆ.ಮಹೇಶ್,ಉಪ ನಿರ್ದೇಶಕ,ಗಣಿ ಮತ್ತು ಭೂವಿಜ್ಞಾನ ಇಲಾಖೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net