ಜೀವರ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ

nrp polce
ಎನ್.ಆರ್.ಪುರದಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದು.
Published on

ಎನ್.ಆರ್.ಪುರ: ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯಕ್ಕಿಂತಲೂ ಜೀವರ ರಕ್ಷಣೆಗಾಗಿ, ಕುಟುಂಬದ ಒಳಿತಿಗಾಗಿ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದು ಪಿಎಸ್‌ಐ ನಿರಂಜನಗೌಡ ಹೇಳಿದರು.

ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ಸಂಚರಿಸುತ್ತಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ಪೊಲೀಸ್ ಠಾಣೆಯಲ್ಲಿ ಗುರುವಾರ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಪಟ್ಟಣದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಸ್ಥಳಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಕೆಲವು ದಿನಗಳಿಂದ ಸಂಚಾರ ನಿಯಮಗಳ ಅರಿವು ಮೂಡಿಸಲಾಗಿತ್ತು. ಆದರೆ ಇದರಿಂದ ಸುಧಾರಣೆ ಕಂಡುಬರಲಿಲ್ಲ. ಹಾಗಾಗಿ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುವವರಿಗೆ ದಂಡ ವಿಧಿಸಲಾಗಿದೆ. ಅಲ್ಲದೆ ಹೆಲ್ಮೆಟ್ ಮಾರಾಟಗಾರರನ್ನು ಕರೆಸಿ ಹೆಲ್ಮೆಟ್ ಕೊಡಿಸಲಾಗಿದೆ ಎಂದರು.
ಯಾವುದೇ ಕಾರಣಕ್ಕೂ ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ನೀಡಬಾರದು. ಅನಾಹುತವಾದರೆ ದೊಡ್ಡ ಮೊತ್ತದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಪ್ರಾರಂಭಿಕ ಹಂತದಲ್ಲಿ ಕೇವಲ ದಂಡ ವಿಧಿಸಿ ಅರಿವು ಮೂಡಿಸಲಾಗುತ್ತದೆ. ಪುನರಾವರ್ತನೆಯಾದರೆ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಪರಾಧ ವಿಭಾಗದ ಪಿಎಸ್‌ಐ ಜ್ಯೋತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net